ನೆಲ್ಯಾಡಿ: ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಜಯಾನಂದ ಬಂಟ್ರಿಯಾಲ್, ಕಾರ್ಯದರ್ಶಿಯಾಗಿ ದೀಪಿಕಾ ಡಿ.ಎಂ., ಉಪಾಧ್ಯಕ್ಷೆಯಾಗಿ ಜೆಸಿಂತಾ ಡಿ.ಸೋಜ ಹಾಗೂ ಜೊತೆ ಕಾರ್ಯದರ್ಶಿಯಾಗಿ ಸುಧೀರ್ಕುಮಾರ್ ಆಯ್ಕೆಯಾಗಿದ್ದಾರೆ.
ಜು.20ರಂದು ಕಾಲೇಜಿನ ಸಭಾಂಗಣದಲ್ಲಿ ನಡೆದ ರಕ್ಷಕ-ಶಿಕ್ಷಕರ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಫಾ.ತೋಮಸ್ ಬಿಜಿಲಿ ಓಐಸಿಯವರು, ಶಾಲೆಯ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಹೇಳಿದರು. ಉಪಪ್ರಾಂಶುಪಾಲ ಜೋಸ್ ಎಂ.ಜೆ., ಪದವಿ ಪೂರ್ವ ಕಾಲೇಜಿನ ಎಚ್ಒಡಿ ಸುಶೀಲ್ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಮನೋಜ್ ಕೆ.ಜೆ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜೋಸ್ ಪ್ರಕಾಶ್ ಸ್ವಾಗತಿಸಿದರು. ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ದೀಪಿಕಾ ಡಿ.ಎಂ.ವಂದಿಸಿದರು. ಲುಸ್ಸಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜಯಾನಂದ ಬಂಟ್ರಿಯಾಲ್ರವರು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷರಾಗಿ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿದ್ದು ಹಾಲಿ ಸದಸ್ಯರಾಗಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ಜೆಸಿಐ ಪೂರ್ವಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.