ಜು.25:ತಾ|ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

0

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ತಾಲೂಕು ಶಾಖೆ ಪುತ್ತೂರು ಇದರ ವತಿಯಿಂದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜು.25 ರಂದು ಸರಕಾರಿ ನೌಕರರ ಸಭಾಭವನದಲ್ಲಿ ಜರಗಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸರಕಾರಿ ನೌಕರರ ಸಂಘ, ಪುತ್ತೂರು ತಾಲೂಕಿನ ಅಧ್ಯಕ್ಷ ಶಿವಾನಂದ ಆಚಾರ್ಯರವರು ವಹಿಸಿಕೊಳ್ಳಲಿದ್ದಾರೆ. ಸನ್ಮಾನಿತರನ್ನು ಶಾಸಕರಾದ ಅಶೋಕ್ ಕುಮಾರ್ ರೈಯವರು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭರತ್ ಬಿ.ಎಂ, ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀಮತಿ ಶ್ರೀಲತಾ, ಪುತ್ತೂರು ಉಪ ಖಜಾನೆ ಸಹಾಯಕ ನಿರ್ದೇಶಕ ಮಹೇಶ್ ಎಸ್, ಗೌರವ ಉಪಸ್ಥಿತಿಯಾಗಿ ತಾಲೂಕು ಸರಕರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಕೆ, ಮೌರಿಸ್ ಮಸ್ಕರೇನ್ಹಸ್‌ರವರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ್ ಬಿ, ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಗೌರವಾಧ್ಯಕ್ಷ ರಾಮಚಂದ್ರ, ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಕೋಶಾಧಿಕಾರಿ ಕೃಷ್ಣ ಬಿರವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here