ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಪಾಲಕರ ಸಭೆ

0

– ಶಿಕ್ಷಣ ಅಂಕ ಗಳಿಕೆಗೆ ಮಾತ್ರ ಸೀಮಿತವಾಗಬಾರದು: ಅಬ್ರಹಾಂ ವರ್ಗೀಸ್

ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪಾಲಕರ ಸಭೆಯು ಜು.19ರಂದು ವಿದ್ಯಾಸಂಸ್ಥೆಯ ಮಿಲೇನಿಯಂ ಸಭಾಂಗಣದಲ್ಲಿ ನಡೆಯಿತು.

ಸಂತ ಜಾರ್ಜ್ ವಿದ್ಯಾಸಂಸ್ಥೆಗಳ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್‌ರವರು ಮಾತನಾಡಿ, ವಿದ್ಯಾರ್ಥಿಗಳನ್ನು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತಗೊಳಿಸದೆ, ಜೀವನ ಪಾಠವನ್ನು ನೀಡಿ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಅನುವು ಮಾಡಿಕೊಡುವ ಶಿಕ್ಷಣವನ್ನು ಶಾಲೆಯಲ್ಲಿ ಶಿಕ್ಷಕರು ಹಾಗೂ ಮನೆಯಲ್ಲಿ ಪೋಷಕರು ನೀಡಬೇಕು ಎಂದರು. ವಿದ್ಯಾಸಂಸ್ಥೆಯ ಸಂಚಾಲಕ ಫಾ.ನೋಮಿಸ್ ಕುರಿಯಕೋಸ್‌ರವರು ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಕಲಿಕೆಗೆ ಪೂರಕವಾದ ಚಟುವಟಿಕೆಗಳನ್ನು ನಡೆಸಿ ಉತ್ತಮ ಶಿಕ್ಷಣ ಪಡೆಯುವ ಅವಕಾಶವನ್ನು ಕಲ್ಪಿಸುತ್ತೇವೆ ಎಂದು ಹೇಳಿದರು. ಮುಖ್ಯಗುರು ಹರಿಪ್ರಸಾದ್ ಕೆ., ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕ ಕರುಣಾಕರರವರು ವಿದ್ಯಾರ್ಥಿಗಳ ಕಲಿಕಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಅನುಷಾ ಎಂ.ಕೆ ಸ್ವಾಗತಿಸಿದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಜೆಸಿಂತಾ ಡಿಸೋಜಾ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here