ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಮತ್ತು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಜು.22ರಂದು ದ.ಕ.ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜು.22 ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.11.15ಕ್ಕೆ ನಗರದ ಜೆಪ್ಪುವಿನ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶೈಕ್ಷಣಿಕ ಸಮ್ಮೇಳನ ಪ್ರಶಸ್ತಿ ಪ್ರದಾನ-ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಮಧ್ಯಾಹ್ನ 2.30ಕ್ಕೆ ನಗರದ ಸರ್ಕ್ಯೂಟ್ ಹೌಸ್ಗೆ ತೆರಳುವರು.ಸಂಜೆ 4.25ಕ್ಕೆ ಮಂಗಳೂರುನಿಂದ ವಿಮಾನದ ಮೂಲಕ ಹೊರಟು ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಜು.22 ಬೆಳಿಗ್ಗೆ 6.20ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸರ್ಕ್ಯೂಟ್ ಹೌಸ್ಗೆ ತೆರಳುವರು.10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.11 ಗಂಟೆಗೆ ಜಪ್ಪಿನಮೊಗರುವಿನಲ್ಲಿ ಮುಸ್ಲಿಂ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸುವರು.ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು.ರಾತ್ರಿ 9.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮಧ್ಯಾಹ್ನ 3 ಗಂಟೆಗೆ ಉಡುಪಿಯಿಂದ ಮಂಗಳೂರು ಆಗಮಿಸಿ, ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.