ವಿಟ್ಲ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಆರೋಪಿ ವಿರುದ್ಧ ಫೋಕ್ಸೊ , ಅತ್ಯಾಚಾರ ಪ್ರಕರಣ ದಾಖಲು

0

ವಿಟ್ಲ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಪರಾರಿಯಾದ ಆರೋಪಿ ಅಬ್ದುಲ್ ಸಮೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿದೆ.


ಆರೋಪಿ ಅಬ್ದುಲ್ ಸಮೀರ್ ಅಪ್ರಾಪ್ತ ಬಾಲಕಿ ಜೊತೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಪ್ರೀತಿಸುತ್ತಿದ್ದು ಮದುವೆಯಾಗುತ್ತೇನೆಂದು ನಂಬಿಸಿ ಬಾಲಕಿಯ ಮನೆಯ ಸಮೀಪದ ನಿರ್ಮಾಣ ಹಂತದ ಮನೆಯೊಂದರ ಬಳಿ ಕರೆದೊಯ್ದು 2019ನೇ ನವಂಬರ್ ಹಾಗೂ ಡಿಸೆಂಬರ್ ತಿಂಗಳ ಮಧ್ಯದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಬಳಿಕ ಆತ ವಿದೇಶಕ್ಕೆ ಪರಾರಿಯಾಗಿರುದ್ದ. ಆರೋಪಿ ಅಬ್ದುಲ್ ಸಮೀರ್ ತಾನು ಅಪ್ರಾಪ್ತಳಾಗಿದ್ದ ಸಮಯದಲ್ಲಿ ಮದುವೆಯಾಗುತ್ತೇನೆಂದು ಹೇಳಿ ಆಕೆಗೆ ಮೊಬೈಲ್‌ನ್ನು ಕೊಟ್ಟು ನಂಬಿಸಿ ಅತ್ಯಾಚಾರವೆಸಗಿ ಮದುವೆಯಾಗದೆ ಮೋಸ ಮಾಡಿರುವುದಾಗಿ ಬಾಲಕಿ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


LEAVE A REPLY

Please enter your comment!
Please enter your name here