ನೆಲ್ಯಾಡಿ: ಗೋಳಿತ್ತೊಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ.
ಸಾಮಾನ್ಯ ಮೀಸಲು ಸ್ಥಾನದಿಂದ ನೋಣಯ್ಯ ಪೂಜಾರಿ ಅಂಬರ್ಜೆ, ಹೇಮಲತಾ ತಿರ್ಲೆ, ಕೆ.ಕುಶಾಲಪ್ಪ ಗೌಡ ಕೊಂಬ್ಯಾನ, ರಮೇಶ ಕೆ.ಬಿ.ಕೊಂಕೋಡಿ, ಶಶಿಧರ ಪಠೇರಿ, ಜನಾರ್ದನ ಗೌಡ ಪಠೇರಿ, ಪಿ.ಕುಶಾಲಪ್ಪ ಗೌಡ ಅನಿಲ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನದಿಂದ ವಿಶ್ವನಾಥ ಮೂಲ್ಯ ನೆಕ್ಕರೆ, ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಕೊರಗಪ್ಪ ಗೌಡ ಕಲ್ಲಡ್ಕ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಮೀನಾಕ್ಷಿ ಆಲಂತಾಯ, ಪರಿಶಿಷ್ಠ ಪಂಗಡ ಮೀಸಲು ಸ್ಥಾನದಿಂದ ಹರೀಶ ನಾಯ್ಕ್ ತಿರ್ಲೆ, ಮಹಿಳಾ ಮೀಸಲು ಸ್ಥಾನದಿಂದ ಭಾರತಿ ಯಸ್ ಪುಳಿತ್ತಡಿ ಹಾಗೂ ರಾಜೀವಿ ಬೊಟ್ಟಿಮಜಲು ಆಯ್ಕೆಗೊಂಡಿದ್ದಾರೆ.
ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್.ಅವರು ಚುನಾವಣಾಧಿಕಾರಿಯಾಗಿದ್ದರು. ಸಂಘದ ಕಾರ್ಯದರ್ಶಿ ಪದ್ಮನಾಭ ಭಟ್, ಹಾಲು ಪರೀಕ್ಷಕ ಧನಂಜಯ ಅಲೆಕ್ಕಿ ಸಹಕರಿಸಿದರು.