ಶ್ರೀಧಾಮ ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ,ಶನಿಪೂಜೆ, ಧನ್ವಂತರಿ ಹವನ

0

ವಿಟ್ಲ: ಶ್ರೀಧಾಮ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಹಿನ್ನೆಯಲ್ಲಿ 48ದಿನಗಳ ಕಾಲ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಏಳನೇ ದಿನವಾದ ಜು.22ರಂದು ಗಣಪತಿ ಯಾಗ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ ನಡೆಯಿತು.

ಬಳಿಕ ಶನಿಪೂಜೆ, ಧನ್ವಂತರಿ ಹವನ, ಸಾಮೂಹಿಕ ಕುಂಕುಮಾರ್ಚನೆ, ನಡೆದು ಮಧ್ಯಾಹ್ನ ಯಾಗದ ಪೂರ್ಣಾವತಿ, ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here