





ಉಪ್ಪಿನಂಗಡಿ: ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲಾ ಸಮಾದೇಷ್ಟ ಡಾ ಮುರಲಿ ಮೋಹನ್ ಚೂಂತಾರು ಉಪ್ಪಿನಂಗಡಿ ದೇವಳದ ಸಂಗಮ ಸ್ಥಳಕ್ಕೆ ಜು .23(ಇಂದು) ಭೇಟಿ ನೀಡಿದರು. ಈ ಸಂದರ್ಭ ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.ಯಾವುದೇ ಕಾರಣಕ್ಕೂ ಪ್ರವಾಸಿಗರು ಮತ್ತು ಭಕ್ತರು ನೀರಿಗೆ ಇಳಿಯದಂತೆ ನಿಯಂತ್ರಿಸಲು ಆದೇಶಿಸಿದರು. ಪ್ರವಾಸಿಗರು ಮತ್ತು ಭಕ್ತಾದಿಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಂತ್ ಪೊರೋಳಿ ಹಾಗೂ ಪ್ರವಾಹ ರಕ್ಷಣಾ ತಂಡದ ಇತರ ಗೃಹ ರಕ್ಷಕರು ಉಪಸ್ಥಿತರಿದ್ದರು.




            






