ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಚೆಲ್ಯಡ್ಕ ಸೇತುವೆ ಮುಳುಗಡೆ – ಸಂಚಾರಕ್ಕೆ ಅಡಚಣೆ

0

ನಿಡ್ಪಳ್ಳಿ: ಮುಳುಗು ಸೇತುವೆ ಎಂದು ಖ್ಯಾತಿ ಪಡೆದಿರುವ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದಲ್ಲಿ ಎರಡನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ. ಜು.22ರಿಂದ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಇಂದು(ಜು.23) ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಜನ ಮತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸೇತುವೆ ಮುಳುಗಡೆಯಿಂದಾಗಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗಿದೆ. ಈ ಮಾರ್ಗವಾಗಿ ಚಲಿಸುವ ಬಸ್ಸುಗಳು ಸಂಟ್ಯಾರ್‌ ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಾಯಿತು. ಇದರಿಂದ ದಿನನಿತ್ಯದ ಕಾರ್ಯಚಟುವಟಿಕೆಗಳಿಗೆ ಈ ಮಾರ್ಗವಾಗಿ ಸಂಚರಿಸುವವರಿಗೆ ಸಮಸ್ಯೆ ಎದುರಾಗಿದೆ. ಗುಮ್ಮಟಗದ್ದೆ, ದೇವಸ್ಯ ಭಾಗದವರು ಸುತ್ತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here