ರೋಟರಿ ಸಿಟಿ, ರೋಟರಿ ಎಲೈಟ್ ನಿಂದ ಉಚಿತ ನೇತ್ರ ಪರೀಕ್ಷೆ, ಕನ್ನಡಕ ವಿತರಣಾ ಶಿಬಿರ

0

ಪುತ್ತೂರು: ಕಣ್ಣು ನಮ್ಮ ದೇಹದ ಅತ್ಯಂತ ಪ್ರಾಮುಖ್ಯ ಅಂಗವಾಗಿದ್ದು, ಕಣ್ಣಿನ ಆರೈಕೆ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಗಮನಹರಿಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಆಶ್ರಯದಲ್ಲಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ‌ ವಿಭಾಗದಲ್ಲಿ ಜು.22 ರಂದು ನಡೆದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜ ಸೇವೆಯಲ್ಲಿ ರೋಟರಿ ಸಂಸ್ಥೆಗಳು ಮುಂಚೂಣಿಯಲ್ಲಿದ್ದು, ಪುತ್ತೂರಿನ ರೋಟರಿ ಸಂಸ್ಥೆಗಳು ಆರೋಗ್ಯ ಕ್ಷೇತ್ರದ ಸುಧಾರಣೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.


ರೋಟರಿ ಪುತ್ತೂರು ಎಲೈಟ್ ಅಧ್ಯಕ್ಷ ಅಬ್ದುಲ್ ರಝಾಕ್ ಕಬಕಕಾರ್ಸ್ ಮಾತನಾಡಿ, ರೋಟರಿ ಸಂಸ್ಥೆಗಳು ಶಿಕ್ಷಣ ಮತ್ತು ಆರೋಗ್ಯದ ಕುರಿತಾಗಿ ಹೆಚ್ಚಿನ ಮುತುವರ್ಜಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.


ವಲಯ 4 ಸಹಾಯಕ ಗವರ್ನರ್ ಲಾರೆನ್ಸ್ ಗೊನ್ಸಾಲಿಸ್ ಶುಭ ಹಾರೈಸಿದರು. ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಮ್ ಕೆ ಬಿ, ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಜೋಕಿಂ‌ ಡಿಸೋಜ, ಸದಸ್ಯರಾದ ಚೆನ್ನಪ್ಪ, ಸವಿತಾ ದೇವಿ, ನಗರಸಭಾ ಸದಸ್ಯ ಜಗನ್ನೀವಾಸ ರಾವ್, ಅಂಧತ್ವ ನಿವಾರಣಾ ಸಂಸ್ಥೆಯ ನೇತ್ರಾಧಿಕಾರಿ ಶಾಂತರಾಜ್ , ಸಿಬ್ಬಂದಿ‌ ಶ್ರೀಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಉಪ ಪ್ರಾಂಶುಪಾಲ ವಸಂತ ಮೂಲ್ಯ ಸ್ವಾಗತಿಸಿ, ರೋಟರಿ ಪುತ್ತೂರು ಸಿಟಿ ಅಧ್ಯಕ್ಷೆ ಗ್ರೇಸಿ ಗೊನ್ಸಾಲ್ವಿಸ್ ವಂದಿಸಿದರು. ಶಿಕ್ಷಕಿ ಮಮತಾ ರೈ ಕಾರ್ಯಕ್ರಮ‌ ನಿರ್ವಹಿಸಿದರು. ಶಿಕ್ಷಕರಾದ ಜಾನ್ ವಾಲ್ಡರ್, ಜಾನೆಟ್ ಪಾಯಿಸ್, ಅರ್ಚನಾ, ಜಯಶ್ರೀ, ರೋಟರಿ ಎಲೈಟ್ ಕಾರ್ಯದರ್ಶಿ ಆಸ್ಕರ್ ಆನಂದ್, ಜೆರೋಮ್ ಪಾಯಿಸ್ ಸಹಕರಿಸಿದರು. ಚೇತನ್ ಕುಮಾರ್, ನಜೀರ್ ಮಠ, ನಿಹಾಲ್ ಶೆಟ್ಟಿ, ರಾಜೇಶ್ ಶೆಟ್ಟಿ, ರಾಜೇಶ್ ರೈ, ಸಿದ್ದಿಕ್ ಕುಂಬ್ರ ಉಪಸ್ಥಿತರಿದ್ದರು.

ಶಿಬಿರದಲ್ಲಿ ಶಾಲೆಯ 669 ವಿದ್ಯಾರ್ಥಿಗಳ‌ ಕಣ್ಣು ತಪಾಸಣೆ ನಡೆಸಲಾಯಿತು. ಈ ಪೈಕಿ ದೃಷ್ಟಿ ನ್ಯೂನ್ಯತೆ ಕಂಡು ಬಂದ 57 ವಿದ್ಯಾರ್ಥಿಗಳನ್ನು ಹೆಚ್ಚಿನ ತಪಾಸಣೆಗೆ ಶಿಫಾರಸು ಮಾಡಲಾಯಿತು.

LEAVE A REPLY

Please enter your comment!
Please enter your name here