ವಿಟ್ಲ: ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ, ಶಿಕ್ಷಕರ ಕೊರತೆ,ಶಾಲಾ ಕೊಠಡಿಗಳ ಕೊರತೆ,ಕೊಠಡಿ ದುರಸ್ತಿ,ಆವರಣ ಗೋಡೆ ಕೊರತೆ ಇತ್ಯಾದಿಗಳ ಮೂಲಭೂತ ಸೌಕರ್ಯಗಳ ಕುರಿತಾದ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವಂತೆ ದಕ್ಷಿಣ ಕನ್ನಡ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರೂ,ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಕರ್ನಾಟಕ ಸರಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿದ ಸಚಿವರು ನಮ್ಮ ಇಲಾಖೆಯು ಸ್ಪಂದಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ದಕ್ಷಿಣ ಕನ್ನಡ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರಿಂದ ಶಿಕ್ಷಣ...