ಮಳೆಗಾಲದ ತುರ್ತು ಸಂದರ್ಭದಲ್ಲಿ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಬಂಟ್ವಾಳ ಶಾಸಕರ ಸೂಚನೆ

0

ವಿಟ್ಲ: ಮಳೆ ನಿರಂತರವಾಗಿ ಸುರಿಯುತ್ತಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದೆ, ಮಳೆಯಿಂದ ಹಾನಿ ಅಥವಾ ನೆರೆಯಿಂದ ತಗ್ಗು ಪ್ರದೇಶಗಳು ಮುಳುಗಡೆಯಾದ ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳು ಸೂಕ್ತವಾದ ರೀತಿಯಲ್ಲಿ ಸ್ಪಂದನೆ ನೀಡಬೇಕು. 24 ಗಂಟೆಯೂ ಅಧಿಕಾರಿಗಳು ತಾಲೂಕು ಕೇಂದ್ರದಲ್ಲಿರಬೇಕು , ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜಲಾವೃತಗೊಳ್ಳುವ ಮುನ್ಸೂಚನೆ ಇರುವ ಮನೆಗಳನ್ನು ಖಾಲಿ ಮಾಡಿ ಅಂತಹ ಕುಟುಂಬಗಳನ್ನು ಕೂಡಲೇ ಗಂಜಿಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here