ಭಾರೀ ಮಳೆಯ ಹಿನ್ನಲೆ: ಶಾಸಕರ ಸೂಚನೆಯಂತೆ ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

0

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಭಾರೀ ಮಳೆಯ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಭಾರೀ ಮಳೆಯ ಕಾರಣಕ್ಕೆ ಮಕ್ಕಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಯ ಗಮನ ಸೆಳೆದಿದ್ದರು. ಅದರಂತೆ ಇಂದು ಮಧ್ಯಾಹ್ನದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಮಳೆ ಪರಿಸ್ಥಿತಿ ನೋಡಿಕೊಂಡು ರಜೆ ನಿರ್ಧಾರ ಕೈಗೊಳ್ಳುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here