ಪುತ್ತೂರು : ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರಿದಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಜು.25 ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಜು.25 ರಂದು ರಜೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.