ಪುತ್ತೂರು: ಕಳೆದ ಮರ್ನಾಲ್ಕು ದಿನಗಳಿಂದ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ರಜೆ ಘೋಷಿಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.