ಮಕ್ಕಳನ್ನು ಮಾನಸಿಕವಾಗಿ ಶಿಸ್ತುಬದ್ದವಾಗಿ ಮಾಡುವ ಕ್ರೀಡೆ- ಭಾಗೀರಥಿ ಮುರುಳ್ಯ
ಸವಣೂರು : ಚೆಸ್ ಎಂಬುದು ಮಕ್ಕಳನ್ನು ಮಾನಸಿಕವಾಗಿ ಶಿಸ್ತು ಬದ್ಧವಾಗಿ ಮಾಡುವ ಕ್ರೀಡೆ, ವಿದ್ಯಾರ್ಥಿಗಳು ತಮ್ಮ ತಮ್ಮ ಪ್ರತಿಭೆಗಳನ್ನು ತೋರಿಸಿ ಮುಂದೆ ರಾಜ್ಯ,ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಜು.24ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯ ಆಶ್ರಯದಲ್ಲಿ ಸವಣೂರಿನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಸದಸ್ಯೆ ಚಂದ್ರಾವತಿ ಸುಣ್ಣಾಜೆ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್,ಕ್ರೀಡಾಕೂಟಗಳ ಸವಣೂರು ವಲಯದ ನೋಡಲ್ ಅಧಿಕಾರಿ ಸಹದೇವ ,ಸವಣೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಎ.ಮನ್ಮಥ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ್ ರೈ ,ಸವಣೂರು ಸ.ಉ.ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಹನೀಫ್ ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಮೊದಲಾದವರಿದ್ದರು. ಶಾಲಾ ಮುಖ್ಯಗುರು ನಿಂಗರಾಜು ಸ್ವಾಗತಿಸಿ ,ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ.ವಂದಿಸಿದರು.