ವಲಯ ಮಟ್ಟದ ಚದುರಂಗ ಸ್ಪರ್ಧೆ – ಸುದಾನ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

0

ಪತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ಸಹಯೋಗದಲ್ಲಿ ಜುಲೈ 24 ರಂದು ನಡೆದ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ 14 ರ ವಯೋಮಿತಿಯ ವಿಭಾಗದಲ್ಲಿ 7ನೇ ತರಗತಿಯ ಭಗತ್ ಕೃಷ್ಣ ಹಾಗೂ ಬಾಲಕಿಯರ ವಿಭಾಗದಲ್ಲಿ ಮೋನಿಕ ಬಿ.ವಿ., ಸಾನ್ವಿತ ಎಂ. ರೈ ಸ್ಪರ್ಧಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೆಯೇ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ಶೆಲ್ಡನ್ ಸಿಕ್ವೇರಾ ಹಾಗೂ ಬಾಲಕಿಯರ ವಿಭಾಗದಲ್ಲಿ ಯಶ್ವಿ ಜೆ. ಶೆಟ್ಟಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17ರ ವಯೋಮಾನದ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಜೆಸಿತ್. ಸಿ. ಎಸ್ ಹಾಗೂ ಅನಿಷ್ ಎಲ್.ರೈ ಬಾಲಕಿಯರ ವಿಭಾಗದಲ್ಲಿ ಅನಿಕ ಯು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶ್ರೀಮತಿ. ಶೋಭಾನಾಗರಾಜ್ ರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here