ಪರ್ಲೊಟ್ಟು : ಕಾರು-ಟಿಪ್ಪರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

0

ವಿಟ್ಲ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ.


ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.


ಘಟನೆಯಲ್ಲಿ ಇನ್ನೋವಾ ಕಾರಿನ ಮುಂಭಾಗ ನಜ್ಜು- ಗುಜ್ಜಾಗಿದೆ. ವಾಹನ ತೆರವುಗೊಳಿಸಿದ ಬಳಿಕ ಸಂಚಾರ ಆರಂಭಗೊಂಡಿತು. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ‌ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here