ಚೆಸ್ ಪಂದ್ಯಾಟ: ರಾಮಕುಂಜ ಆ.ಮಾ.ಶಾಲೆಯ ಭರತೇಶ್‌ಗೆ ಪ್ರಥಮ ಸ್ಥಾನ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ಮರ್ದಾಳ ಗುಡ್ ಶೆಫಾರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಭರತೇಶ್ ಕುಮಾರ್‌ರವರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.


ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮ ಬಿ, ರಾಘವ ಹಾಗೂ ಮೂರ್ತಿಯವರು ತರಬೇತಿ ನೀಡಿದ್ದರು. ಶಾಲಾ ಮುಖ್ಯಗುರು ಗಾಯತ್ರಿ ಯು.ಎನ್, ಆಡಳಿತಾಧಿಕಾರಿ ಆನಂದ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಪ್ರೋತ್ಸಾಹಿಸಿದ್ದರು.

LEAVE A REPLY

Please enter your comment!
Please enter your name here