ಪುತ್ತೂರು:ತಾಲೂಕಿನ ನಿಡ್ಪಳ್ಳಿ ಹಾಗೂ ಆರ್ಯಾಪು ಗ್ರಾ.ಪಂಗಳಲ್ಲಿ ತೆರವಾಗಿರುವ ತಲಾ ಒಂದು ಸ್ಥಾನಗಳಿಗೆ ಜು.23ರಂದು ಮರು ಚುನಾವಣೆ ನಡೆದಿದ್ದು ನಾಳೆ(ಜು.26) ಫಲಿತಾಂಶ ಪ್ರಕಟವಾಗಲಿದೆ.ಬೆಳಗ್ಗೆ ಮತಗಳ ಎಣಿಕೆ ತಾಲೂಕು ಆಡಳಿತ ಕೇಂದ್ರದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆದು ನಡೆಯಲಿದ್ದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್, ಪುತ್ತಿಲ ಪರಿವಾರ ನಡುವೆ ತ್ರಿಕೋನ ಸ್ಪರ್ಧೆ ನಡೆದಿದ್ದು ಫಲಿತಾಂಶಕ್ಕಾಗಿ ಜನ ಕಾತರದಿಂದ ಕಾಯುತ್ತಿದ್ದಾರೆ
ನಿಡ್ಪಳ್ಳಿ ಗ್ರಾ.ಪಂ.ನ ನಿಡ್ಪಳ್ಳಿ ವಾರ್ಡ್ 2ರ ಸಾಮಾನ್ಯ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ.ಚಂದ್ರಶೇಖರ ಪ್ರಭು ಗೋಳಿತ್ತಡಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಕಣದಲ್ಲಿದ್ದರು.
ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜಗದೀಶ ಭಂಡಾರಿ ಗೆಣಸಿನಕುಮೇರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜಿ.ಪುರುಷೋತ್ತಮ ಪ್ರಭು ಅಬ್ಬುಗದ್ದೆ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಕಣದಲ್ಲಿದ್ದರು.