ಆರ್ಯಾಪು ಗ್ರಾ.ಪಂ ಉಪ ಚುನಾವಣೆ- ಪುತ್ತಿಲ ಸುಬ್ರಹ್ಮಣ್ಯ ಬಲ್ಯಾಯ ಜಯಭೇರಿ

0

ಸುಬ್ರಹ್ಮಣ್ಯ ಬಲ್ಯಾಯ-499

ಪುರುಷೋತ್ತಮ ಪ್ರಭು-353

ಜಗದೀಶ ಭಂಡಾರಿ-140

ತಿರಸ್ಕೃತ-7

ಪುತ್ತೂರು: ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಮಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಇದರಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353 ಮತ
ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ 140 ಮತಗಳನ್ನು ಪಡೆದುಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಡೆದಿದ್ದ ಸ್ಥಾನವನ್ನು ಈ ಭಾರಿ ಪುತ್ತಿಲ ಪರಿವಾರ ಕಸಿದುಕೊಂಡಿದೆ. ವಿಧಾನ ಸಭಾ ಚುನಾವಣೆಯಲ್ಲಿ ನಡೆದಂತೆ ಬಿಜೆಪಿ ಆರ್ಯಾಪು ಗ್ರಾ.ಪಂ ಉಪಚುನಾವಣೆಯಲ್ಲಿಯೂ ಮೂರನೇ ಸ್ಥಾನ ಪಡೆದುಕೊಂಡಿದೆ.


LEAVE A REPLY

Please enter your comment!
Please enter your name here