ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ರವರು ಸವಣೂರಿಗೆ ಭೇಟಿ ನೀಡಿ, ಸವಣೂರು ಬಸದಿಯಲ್ಲಿ ಮಾತೆ ಪದ್ಮಾವತಿ ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಸವಣೂರಿನಲ್ಲಿ ಕಾರ್ಯಕರ್ತರನ್ನು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ, ಉಭಯಕಶೋಲಾಪರಿ ನಡೆಸಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ, ನ್ಯಾಯವಾದಿ ನಿರ್ಮಲ್ ಕುಮಾರ್ ಜೈನ್, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾ.ಪಂ ಅಧ್ಯಕ್ಷೆ ರಾಜೀವಿ ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಇಂದಿರಾ ಬಿ.ಕೆ, ಜಿನಬಸದಿಯ ಆಡಳಿತ ಮಂಡಳಿ ಅಧ್ಯಕ್ಷ ಶತ್ರುಂಜಯ ಅರಿಗ ಬೆಳಂದೂರುಗುತ್ತು. ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸುಪ್ರೀತ್ ರೈ ಖಂಡಿಗ, ಸವಣೂರು ಬೊಳ್ಳಿ ಬೊಲ್ಪು ತುಳುಕೂಟ ಸಂಸ್ಥೆಯ ಗೌರವಾಧ್ಯಕ್ಷ ಗಿರಿಶಂಕರ್ ಸುಲಾಯ ದೇವಸ್ಯ, ಉಪಾಧ್ಯಕ್ಷ ರಾಮಕೃಷ್ಣ ಪ್ರಭು, ಕೋಶಾಧಿಕಾರಿ ತಾರಾನಾಥ ಕಾಯರ್ಗ, ಪ್ರಮುಖರಾದ ಜಿತಾಕ್ಷ ಜಿ. ಕೀರ್ತನ್ ಕೋಡಿಬೈಲು, ಗ್ರಾ.ಪಂ.ಸದಸ್ಯೆ ಚಂದ್ರಾವತಿ ಸುಣ್ಣಾಜೆ, ಬಾಲಚಂದ್ರ ರೈ ಕೆರೆಕೋಡಿ, ಸಚಿನ್ ಸವಣೂರು ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.