ಚೆಸ್: ಆತೂರು ಬದ್ರಿಯಾ ಆ.ಮಾ.ಶಾಲೆಯ ಮುಹಮ್ಮದ್ ಅದಿಲ್, ಇಬ್ರಾಹಿಂ ಬಾಷಿತ್ ತಾಲೂಕು ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಗುಡ್ ಶೆಫರ್ಡ್ ಆಂಗ್ಲ ಮಾಧ್ಯಮ ಶಾಲೆ ಮರ್ದಾಳ ಇದರ ಆಶ್ರಯದಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಆತೂರು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.


10ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಆದಿಲ್‌ರವರು ಪ್ರೌಢಶಾಲಾ ವಿಭಾಗದಲ್ಲಿ ಚತುರ್ಥ ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ ೭ನೇ ತರಗತಿಯ ಇಬ್ರಾಹಿಂ ಬಾಷಿತ್‌ರವರು ತೃತೀಯ ಸ್ಥಾನ ಪಡೆದುಕೊಂಡು ತಾಲೂಕುಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ದಿವ್ಯ ಪಿ.ಎನ್.ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here