ಪುತ್ತೂರು: ಈಶ್ವರಮಂಗಲ ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಮಾದಕ ವ್ಯಸ್ತು ಸೇವೆನೆ ಮಾಡಿದ ಕುರಿತು ವೈದ್ಯಕೀಯ ಪರೀಕ್ಷೆಯಿಂದ ಬೆಳಕಿಗೆ ಬಂದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೊಹಮ್ಮದ್ ಬಶೀರ್(26ವ) ಆಗಿದ್ದು, ಅವರು ಈಶ್ವರಮಂಗಲ ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂದು ಸಂಪ್ಯ ಪೊಲೀಸ್ ಠಾಣೆಗೆ ಬಂದ ಮಾಹಿತಿಯಂತೆ ಎಸ್.ಐ ಧನಂಜಯ ಬಿ.ಸಿ ಅವರು ಅಲ್ಲಿಗೆ ತೆರಳಿ ವ್ಯಕ್ತಿಯನ್ನು ವಿಚಾರಿಸಿದಾಗ ಮೋಹಮ್ಮದ್ ಬಶೀರ್ ಸಮರ್ಪಕ ಉತ್ತರ ನೀಡಲು ಅಸಮರ್ಥರಾಗಿದ್ದು,ಯಾವುದೋ ಮಾದಕ ವಸ್ತು ಸೇವನೆ ಮಾಡಿರುವ ಕುರಿತು ತಿಳಿಸಿದ್ದರು. ಬಳಿಕ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿ ಮೊಹಮ್ಮದ್ ಬಶೀರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.