ಪುತ್ತೂರು: ಕೊಂಬೆಟ್ಟು ಸರಕರಿ ಪ ಪೂ ಕಾಲೇಜು ಹಾಗೂ ಹಾರಾಡಿ ಸರಕಾರಿ ಹಿ ಪ್ರಾ ಶಾಲೆಗೆ ತಲಾ ಒಂದು ಕೋಟಿ ರೂ ಅನುದಾನ ಮಂಜೂರು ಮಾಡಲಗಿದೆ ಎಂದು ಶಾಸಕರಾದ ಅಶೋಕ್ ಕುಮಾರ್ ರೈ ತಿಳಿಸಿದರು.
ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಉಪನ್ಯಾಸಕರ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು ಶಾಸಕರ ಸಿಪಾರಸ್ಸಿನಂತೆ ಎಂ ಆರ್ ಪಿ ಎಲ್ ಸಂಸ್ಥೆಯವರು ಕೊಂಬೆಟ್ಟು ಕಾಲೇಜಿಗೆ ಒಂದು ಕೋಟಿ ಹಾಗೂ ಹಾರಾಡಿ ಶಾಲೆಗೆ ನೂತನ ಕೊಠಡಿ ನಿರ್ಮಾಣಕ್ಕೆ ಒಂದು ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ. ಈ ಅನುದಾನದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾರ್ಯ ನಡೆಯಲಿದ್ದು ಶೀಘ್ರದಲ್ಲೇ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.
ಕೊಂಬೆಟ್ಟು ಕಾಲೇಜಿನಲ್ಲಿ ಕೊಠಡಿ ಕೊರತೆ ಇರುವ ಬಗ್ಗೆ ಕಾಯಾಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಪ್ರೌಢ ಶಾಲಾ ವಿಭಾಗದ ಕಾರ್ಯಾಧ್ಯಕ್ಷರಾದ ಜೋಕಿಂ ಡಿಸೋಜಾರವರು ಅನುದಾನ ನೀಡುವಂತೆ ಶಾಸಕರಿಗೆ ಮನವಿ ಮಾಡಿದ್ದರು. ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು ಇಲ್ಲಿಯೂ ಕೊಠಡಿ ಕೊರತೆ ಇರುವ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿತ್ತು. ಎರಡೂ ಶಿಕ್ಷಣ ಕೇಂದ್ರಗಳಿಗೆ ಅನುದಾನವನ್ನು ಮಂಜೂರು ಮಾಡಲಾಗಿದೆ.