ಚೆಸ್: ರಾಮಕುಂಜ ಕ.ಮಾ.ಪ್ರೌಢಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಮರ್ದಾಳ ಗುಡ್ ಶೆಫರ್ಡ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಹತ್ತನೇ ತರಗತಿಯ ಅನುಶ್ರೀ ಉಡುಪ ಆರ್., ತೃತೀಯ ಸ್ಥಾನ, ಮನ್ವಿತ್ ೫ನೇ ಸ್ಥಾನ, ಎಂಟನೇ ತರಗತಿಯ ಮನೀಶ್ ಹಾಗೂ ಝಮೀರ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲರೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here