ತಾ.ಮಟ್ಟದ ಟೇಬಲ್ ಟೆನ್ನಿಸ್ : ಸಂತ ಫಿಲೋಮಿನಾ ಆಂಗ್ಲ ಮಾ. ಹಿ.ಪ್ರಾ. ಶಾಲೆಯ ಬಾಲಕ, ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಪುತ್ತೂರು ಇವರ ಸಹಯೋಗದಿಂದ ಟೇಬಲ್ ಟೆನ್ನಿಸ್ ಪಂದ್ಯಾಟದ ಉದ್ಘಾಟನಾ ಸಮಾರಂಭವು ಜು.25ರಂದು ನಡೆಯಿತು.
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ರೆ.ಫಾ ಮ್ಯಾಕ್ಸಿಮ್ ಡಿಸೋಜ ರವರೊಂದಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರೆಲ್ಲರೂ ಜೊತೆಗೂಡಿ ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿದರು .
ಪ್ರಾಸ್ತಾವಿಕ ಮಾತುಗಳನ್ನಾಡಿದ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರಗೌಡ ಇವರು ಟೇಬಲ್ ಟೆನ್ನಿಸ್ ಪಂದ್ಯಾಟದ ನಿಯಮಾವಳಿಗಳ ಬಗ್ಗೆ ತಿಳಿ ಹೇಳಿ ಶುಭ ಹಾರೈಸಿದರು.


ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷ ವಿವೇಕ್ ಆಳ್ವ ಇವರು “ಕ್ರೀಡೆಗಳಿಂದ ರೋಗ ನಿರೋಧಕ ಶಕ್ತಿ ಉತ್ಪಾದನೆಯಾಗುತ್ತದೆ. ಕ್ರೀಡೆಗಳು ವಿದ್ಯಾರ್ಥಿಗಳಿಗೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕ ಬೆಳವಣಿಗೆಗೆ ಕೂಡ ಸಹಕಾರಿ “ಎಂದರು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ತಾರವರು “ಗೆಲುವು- ಸೋಲು ಇವೆರಡನ್ನು ಸಮಾನವಾಗಿ ಸ್ವೀಕರಿಸಬೇಕು” ಎಂದು ಕ್ರೀಡಾಪಟುಗಳನ್ನು ಹುರಿದುಂಬಿಸಿದರು.
ಉದ್ಘಾಟಕರೂ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರೆ.ಫಾ.ಮ್ಯಾಕ್ಸಿಮ್ ಡಿಸೋಜಾರವರು ಮಾತನಾಡಿ ‘ಸೋಲೆ ಗೆಲುವಿನ ಸೋಪಾನ’ ಎಂಬ ನಾನ್ನುಡಿಯಂತೆ ವಿದ್ಯಾರ್ಥಿಗಳು ಸೋಲು- ಗೆಲುವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸುವ ಆತ್ಮವಿಶ್ವಾಸವನ್ನು ಬೆಳೆಸುವಂತಾಗಲಿ ಎಂದು ಹಾರೈಸಿದರು. ತದನಂತರ ಟೇಬಲ್ ಟೆನ್ನಿಸ್ ಚೆಂಡನ್ನು ಟಾಸ್ ಮಾಡುವ ಮೂಲಕ ಪಂದ್ಯಾಟಕ್ಕೆ ಅಧಿಕೃತ ಚಾಲನೆಯನ್ನು ನೀಡಿದರು.


ಸಮರೋಪ ಕಾರ್ಯಕ್ರಮದಲ್ಲಿ ವಿಜೇತರಾದ ಎಲ್ಲಾ ಕ್ರೀಡಾಪಟುಗಳಿಗೆ ಪದಕಗಳನ್ನು ಹಾಗೂ ಟ್ರೋಫಿಗಳನ್ನು ವಿತರಿಸಲಾಯಿತು. ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲಾ ಸ್ಪರ್ಧಾಳುಗಳು , ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಸುಭೋದಾ ಪ್ರೌಢಶಾಲಾ ಕ್ರೀಡಾಪಟುಗಳು ಹಾಗೂ 14ರ ಒಳಗೆ 8ನೇ ತರಗತಿಯ ಬಾಲಕರ ವಿಭಾಗದಲ್ಲಿ ಸಂತ ಫಿಲೋಮಿನಾ ಪ್ರೌಢ ಶಾಲೆ ಮತ್ತು ಬಾಲಕಿಯರ ವಿಭಾಗದಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲಾ ಕ್ರೀಡಾಪಟುಗಳು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಹರಿಪ್ರಸಾದ್, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿಜಯ್, ಪುತ್ತೂರು ನಗರ ವಲಯ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಿಕ್ಷಣ ವಿಭಾಗದ ನೋಡಲ್ ಅಧಿಕಾರಿಗಳಾದ ಐವಿ ಗ್ರೆಟ್ಟಾ ಪಾಯ್ಸ್ ಮತ್ತು ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್, ರಕ್ಷಕ- ಶಿಕ್ಷಕ ಸಂಘದ ಸಹಕಾರದರ್ಶಿ ನಯನಾ ರೈ ಇವರೆಲ್ಲರೂ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಿಸ್ಟರ್ ಲೋರಾ ಪಾಯ್ಸ್ ರವರು ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಕ ಸದಾಶಿವ ನಾಯ್ಕ್ ರವರು ವಂದನಾರ್ಪಣೆಗೈದರು. ರೀನಾ ಸೆರಾವೊ ಇವರು ಉದ್ಘಾಟನಾ ಸಮಾರಂಭದ ನಿರೂಪಣೆ ಹಾಗೂ ದೀಪ್ತಿ ದಲ್ಮೇದಾ ಇವರು ಸಮಾರೋಪ ಸಮಾರಂಭದ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here