





ಪಾಣಾಜೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಹಾಗೂ ಸೈಂಟ್ ಫಿಲೋಮಿನಾ ಅಂಗ್ಲ ಮಾಧ್ಯಮ ಪ್ರೌಢಶಾಲೆ, ಪುತ್ತೂರು ಇದರ ಸಹಯೋಗದೊಂದಿಗೆ ಜು.25ರಂದು ನಡೆದ ತಾಲ್ಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ಬಾಲಕ, ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.



14ರ ವಯೋಮಾನದ ಎಂಟನೇ ತರಗತಿಯ ಬಾಲಕಿಯರ ಟೇಬಲ್ ಟೆನ್ನಿಸ್ ವಿಭಾಗದಲ್ಲಿ ಸ್ವಸ್ತಿಕ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್ ಪಿ ಅವರು ತರಬೇತಿ ನೀಡಿರುತ್ತಾರೆ.









