ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ ಮತ್ತು ಬಂಟ್ವಾಳ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇವುಗಳ ಸಹಭಾಗಿತ್ವದಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜು.25ರಂದು ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು.
ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ಅನುರಾಧ ಆರ್. ಶೆಟ್ಟಿ, ರೋಟರಿ ವಲಯ 15ರ ಸಹಾಯಕ ಗವರ್ನರ್ ಲಾರೆನ್ಸ್ ಗೊನ್ಸಾಲ್ವಿಸ್, ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಯುನಿಕ್, ಆನಂದಾಶ್ರಮ ಟ್ರಸ್ಟ್ನ ನಿರ್ದೇಶಕ ಸದಾಶಿವ ಪೈ, ಜಿಲ್ಲಾ ಅಂಧತ್ವ ನಿವಾರಣಾ ಘಟಕದ ನೇತ್ರಾಧಿಕಾರಿ ಅನಿಲ್ ರಾಮಾನುಜಂ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳಿಗ, ದಂತ ವೈದ್ಯ ಡಾ. ರಾಜಾರಾಮ್ ಕೆ.ಬಿ., ರೋಟರಿ ಜಿಲ್ಲೆ 3181ರ ವಲಯ ಸೇನಾನಿ ರವೀಂದ್ರ ದರ್ಬೆ ಉಪಸ್ಥಿತರಿದ್ದರು.
ಶಿಬಿರದಲ್ಲಿ 180 ಮಂದಿಯ ನೇತ್ರ ತಪಾಸಣೆ ನಡೆಸಲಾಗಿದ್ದು, ನೇತ್ರ ಶಸ್ತ್ರ ಚಿಕಿತ್ಸೆಗೆ 11 ಮಂದಿಯನ್ನು ಕಳುಹಿಸಿಕೊಡಲಾಯಿತು. 70 ಮಂದಿಗೆ ಉಚಿತ ಕನ್ನಡಕವನ್ನು ವಿತರಿಸಲಾಯಿತು. 35 ಮಂದಿ ರಕ್ತದಾನ ಮಾಡಿದರು.