ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಮಂಜುಳ ಅವರಿಗೆ ತುಮಕೂರು ಜಿಲ್ಲೆಗೆ ವರ್ಗಾವಣೆಯಾಗಿದೆ. ಕುಟ್ರುಪ್ಪಾಡಿ ಗ್ರಾ.ಪಂ.ಪಿಡಿಒ ಆನಂದ ಎ.,ಅವರು ನೆಲ್ಯಾಡಿ ಗ್ರಾ.ಪಂ.ನ ಪ್ರಭಾರ ಪಿಡಿಒ ಆಗಿ ನೇಮಕಗೊಂಡಿದ್ದು ಜು.೨೭ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ 5 ವರ್ಷ 2 ತಿಂಗಳಿನಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರ ತಾಲೂಕಿನ ತಿಪ್ಪೂರು ನಿವಾಸಿಯಾಗಿದ್ದ ಮಂಜುಳ ಅವರಿಗೆ ತುಮಕೂರು ಜಿಲ್ಲೆಯ ಕೊರಟಿಗೆರೆ ತಾಲೂಕಿನ ಅಗ್ರಹಾರ ಗ್ರಾ.ಪಂ.ಗೆ ವರ್ಗಾವಣೆಯಾಗಿದೆ. ಈ ಹಿನ್ನೆಲೆಯಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಆಗಿ ಕುಟ್ರುಪ್ಪಾಡಿ ಗ್ರಾ.ಪಂ.ಪಿಡಿಒ ಆನಂದ ಎ.,ಅವರು ನೇಮಕಗೊಂಡಿದ್ದಾರೆ. ಆನಂದ ಅವರು ಕಡಬ ಗ್ರಾ.ಪಂ.ನಲ್ಲಿ 18 ವರ್ಷ ಗುಮಾಸ್ತರಾಗಿ ಕೆಲಸ ನಿರ್ವಹಿಸಿ 2006ರಲ್ಲಿ ಗ್ರೇಡ್ 1 ಕಾರ್ಯದರ್ಶಿಯಾಗಿ ಆಲಂಕಾರು ಗ್ರಾ.ಪಂ.ಗೆ ನೇಮಕಗೊಂಡಿದ್ದರು. ಬಳಿಕ ಅವರು ಗ್ರೇಡ್ 2 ಕಾರ್ಯದರ್ಶಿಯಾಗಿ ಭಡ್ತಿಗೊಂಡು ಮಂಗಳೂರಿನ ಅಡ್ಯಾರು, ಕಡಬ ಗ್ರಾ.ಪಂ.ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಪಿಡಿಒ ಆಗಿ ಮುಂಭಡ್ತಿ ಪಡೆದು ನೂಜಿಬಾಳ್ತಿಲ ಗ್ರಾ.ಪಂ.ಗೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಕುಟ್ರುಪ್ಪಾಡಿ ಗ್ರಾ.ಪಂ.ಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಕೊಯಿಲ, ರಾಮಕುಂಜ, ಪೆರಾಬೆ, ಮರ್ದಾಳ ಗ್ರಾಮ ಪಂಚಾಯಿತಿಗಳಲ್ಲಿ ಪ್ರಭಾರ ಪಿಡಿಒ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು.
Home ಇತ್ತೀಚಿನ ಸುದ್ದಿಗಳು ನೆಲ್ಯಾಡಿ ಗ್ರಾ.ಪಂ.ಪಿಡಿಒ ಮಂಜುಳ ತುಮಕೂರುಗೆ ವರ್ಗಾವಣೆ – ಪ್ರಭಾರ ಪಿಡಿಒ ಆಗಿ ಕುಟ್ರುಪ್ಪಾಡಿ ಗ್ರಾ.ಪಂ.ಪಿಡಿಒ ಆನಂದ...