ಗ್ರಾ.ಪಂ.ಉಪಚುನಾವಣೆ ವಿಜಯೋತ್ಸವದಲ್ಲಿ ಡಿಜೆ ಸದ್ದು-ಸಾರ್ವಜನಿಕರಿಗೆ ತೊಂದರೆ ಆರೋಪ – ಪುತ್ತಿಲ ಪರಿವಾರದ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು:ಗ್ರಾ.ಪಂ.ಉಪಚುನಾವಣೆಯಲ್ಲಿ ಗೆದ್ದ ಸಂಭ್ರಮದಲ್ಲಿ ಅನುಮತಿ ರಹಿತವಾಗಿ ಡಿ.ಜೆ.ಸೌಂಡ್ ಬಳಕೆ ಮಾಡಿ ವಿಜಯೋತ್ಸವ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಲಾಗಿದೆ ಆರೋಪಿಸಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪುತ್ತೂರು ನಗರ ಠಾಣಾ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ ಹಿನ್ನಲೆಯಲ್ಲಿ ತಾಲೂಕು ಆಡಳಿತ ಸೌಧದಿಂದ ಮುಕ್ರಂಪಾಡಿ ತನಕ ಪುತ್ತಿಲ ಪರಿವಾರ ನಡೆಸಿದ ವಿಜಯೋತ್ಸವದಲ್ಲಿ ಅನುಮತಿ ರಹಿತವಾಗಿ ಡಿಜೆ ಸೌಂಡ್ ಬಳಕೆ ಮಾಡಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿ ಪುತ್ತೂರು ನಗರ ಠಾಣಾ ಪೊಲೀಸರು ಪುತ್ತಿಲ ಪರಿವಾರದ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಅನುಮತಿಗಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ತನಿಖೆ ನಡೆಸಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಜು.27ರಂದು ನಗರ ಪೊಲೀಸ್ ಠಾಣೆಗೆ ಆದೇಶ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿರುವ ಕುರಿತು ವೆಬ್‌ಸೈಟ್‌ನಲ್ಲಿ ಸಂಜೆ ವರದಿ ಪ್ರಸಾರಗೊಂಡಿತ್ತು. ಆದರೆ ನ್ಯಾಯಾಲಯದ ಅನುಮತಿ ಬಳಿಕವಷ್ಟೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದರು. ನ್ಯಾಯಾಲಯದ ಅನುಮತಿಯಂತೆ ರಾತ್ರಿ ವೇಳೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here