ಜು.30: ತಿಂಗಳಾಡಿ ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ

0

ಪುತ್ತೂರು: ತಿಂಗಳಾಡಿ ಶ್ರೀ ಲಕ್ಷ್ಮೀ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜು.30 ರಂದು ಅಪರಾಹ್ನ ಸಹಕಾರಿಯ ಕೇಂದ್ರ ಕಛೇರಿ ತಿಂಗಳಾಡಿ ಶ್ರೀ ಲಕ್ಷ್ಮೀ ಸಂಕೀರ್ಣದ ಆವರಣದಲ್ಲಿ ಸಹಕಾರಿಯ ಅಧ್ಯಕ್ಷ ಹರೀಶ ಪುತ್ತೂರಾಯರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ತಾವೆಲ್ಲರೂ ಮಹಾಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಆಡಳಿತ ಮಂಡಳಿಯ ಆದೇಶಾನುಸಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ ಭಟ್‌ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here