ಪುತ್ತೂರು: ಸಂಪ್ಯದಲ್ಲಿ ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿಯಾದ ಘಟನೆ ಜು.29 ರ ಸಂಜೆ ನಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಜ್ಞಾಹೀನರಾಗಿದ್ದ ಅವರನ್ನು ಬೈಕ್ ಸವಾರ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಜತೆಗಿದ್ದ ಆಧಾರ್ ಕಾರ್ಡ್ ಪ್ರಕಾರ ಮಹಿಳೆಯನ್ನು ಪಾಣಾಜೆ ನಿವಾಸಿ ಜಯಂತಿ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ