ಉದ್ಯಮಿ ಮಿತ್ರಂಪಾಡಿ ಜಯರಾಮ ರೈಯವರಿಂದ ಮಾಜಿ ಸೈನಿಕರ ಸಂಘದ ಕಲ್ಯಾಣ ನಿಧಿಗೆ ಧನಸಹಾಯ

0

ಪುತ್ತೂರು: ಅಬುದಾಮಿ ಉದ್ಯಮಿ ಮಿತ್ರಂಪಾಡಿ ಜಯರಾಮ ರೈಯವರಿಂದ ಪುತ್ತೂರು ಮಾಜಿ ಸೈನಿಕರ ಸಂಘದ ಕಲ್ಯಾಣ ನಿಧಿಗೆ ರೂ.10 ಸಾವಿರ ಧನಸಹಾಯವನ್ನು ಹಸ್ತಾಂತರಿಸಿರುತ್ತಾರೆ.

ಜು.26ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನಡೆದ 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಿತ್ರಂಪಾಡಿ ಜಯರಾಮ ರೈಯವರು ಈ ಕೊಡುಗೆಯನ್ನು ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ ರೋಟರಿ ಕ್ಲಬ್ ಪುತ್ತೂರು ಸಿಟಿಯ ಅಧ್ಯಕ್ಷೆ ಗ್ರೇಸಿ ಗೊನ್ಸಾಲ್ವಿಸ್ ರವರ ಮುಖಾಂತರ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ ನಾರಾಯಣ ಭಟ್ ರವರಿಗೆ ಹಸ್ತಾಂತರಿಸಿರುತ್ತಾರೆ.
ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಗಳಾದ ಲಾರೆನ್ಸ್ ಗೊನ್ಸಾಲ್ವಿಸ್, ನರಸಿಂಹ ಪೈ, ಪುರಂದರ ರೈ, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಜೈರಾಜ್ ಭಂಡಾರಿ, ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷ ಪಶುಪತಿ ಶರ್ಮ, ರೋಟರಿ ಕ್ಲಬ್ ಪುತ್ತೂರು ಎಲೈಟ್ ಅಧ್ಯಕ್ಷ ಅಬ್ದುಲ್ ರಝಾಕ್ ಕಬಕಕಾರ್ಸ್, ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಅಧ್ಯಕ್ಷ ಸುಂದರ ರೈ ಬಲ್ಕಾಡಿ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷ ಡಾ.ರಾಜೇಶ್ ಬೆಜ್ಜಂಗಳ, ಇನ್ನರ್ ವೀಲ್ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ, ಕೆ.ಎಸ್.ಆರ್.ಟಿ.ಸಿ ಪುತ್ತೂರು ಉಪ ವಿಭಾಗದ ಡಿಸಿ ಜಯಕರ್ ಶೆಟ್ಟಿ ಸಹಿತ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here