ಆ.2ರಂದು ಕಡಬ ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ಕಡಬದಲ್ಲಿ ಬೃಹತ್ ಮೌನ ಮೆರವಣಿಗೆ

0

ಕಡಬ: ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನ್ಯಾಯಾಲಯ ಸಂತೋಷ್ ರಾವ್ ಅವರನ್ನು ನಿರ್ದೋಷಿ ಎಂದು ಬಿಡುಗಡೆಗೊಳಿಸಿದ್ದು, ಆದರೆ ಸೌಜನ್ಯನ್ನು ಕೊಂದವರು ಯಾರು? ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಬವಿಸಿದ್ದು, ಕೂಡಲೇ ಮರು ತನಿಖೆ ನಡೆಸಿ ನಿಜವಾದ ಸೌಜನ್ಯ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆ, ಎಲ್ಲಾ ಸಮುದಾಯದ ಸಹಕಾರದೊಂದಿಗೆ ಬೃಹತ್ ಮೌನ ಮೆರವಣಿಗೆ ಆ.2ರಂದು ಕಡಬದಲ್ಲಿ ನಡೆಯಲಿದೆ.
ಈ ಬಗ್ಗೆ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ.
ಅ.2ರಂದು ಪೂರ್ವಾಹ್ನ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಹೊರಟು ಕಡಬ ಮಿನಿ ವಿಧಾನ ಸೌಧದವರೆಗೆ ನಡೆಯಲಿದೆ. ಬಳಿಕ ಕಡಬ ತಹಸೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ ನಡೆಯಲಿದೆ.

LEAVE A REPLY

Please enter your comment!
Please enter your name here