ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜು.30 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯುರು ಮತ್ತು ಸಲಹಾ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಉಪಾದ್ಯಕ್ಷ ಚಿದಾನಂದ ಬೈಲಾಡಿ, ಸಂಘದ ನಿಕಟ ಪೂರ್ವ ಅಧ್ಯಕ್ಷ ಶಿವರಾಮ ಹೆಚ್ ಡಿ, ಯುವ ಸಂಘದ ಅಧ್ಯಕ್ಷ ನಾಗೇಶ್ ಕೆಡೆಂಜಿ, ಒಕ್ಕಲಿಗ ಸ್ವಸಹಾಯ ಸಂಘದ ಕಾರ್ಯದರ್ಶಿ ದಿವ್ಯಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸುಂದರ ಗೌಡ, ಮಹಿಳಾ ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ವಾರಿಜಾ, ಯುವ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಾಯ ಗೌಡ ಪಾಲ್ತಾಡಿ, ಒಕ್ಕಲಿಗ ಸ್ವ ಸಹಾಯ ಸಂಘದ ಅಧ್ಯಕ್ಷ ಮನೋಹರ್ ಡಿ ವಿ ಅವರು ವಾರ್ಷಿಕ ವರದಿ ವಾಚಿಸಿದರು. ಸಂಘದ ಖಜಾಂಚಿ ಲಿಂಗಪ್ಪ ಗೌಡ ಲೆಕ್ಕಪತ್ರ ಮಂಡಿಸಿದರು. ಸಮುದಾಯ ಉಸ್ತುವಾರಿ ಭವನದ ದಯಾನಂದ ಕೆ ಎಸ್ ಅವರು ಸಮುದಾಯ ಭವನದ ಲೆಕ್ಕಪತ್ರ ಮಂಡಿಸಿದರು.
ವಿದ್ಯಾರ್ಥಿ ವೇತನ ವಿತರಣೆ:
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇತ್ತೀಚೆಗೆ ನಿಧನರಾದ ಸಂಘದ ಪೂರ್ವಾಧ್ಯಕ್ಷ ಚಂದ್ರಶೇಖರ್ ಮುಂಗ್ಲಿಮನೆ ಅವರಿಗೆ ಸಭೆಯ ಆರಂಭದಲ್ಲಿ ಮೌನ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.