ಆ 1- 8 ಕಾಣಿಯೂರಿನಲ್ಲಿ ಮಧ್ಯವರ್ಜನ ಶಿಬಿರ

0

ಕಾಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಕಾಣಿಯೂರು ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಆಗಸ್ಟ್ 1ರಿಂದ 8 ದಿನಗಳ ಕಾಲ 1700 ನೇ ಮದ್ಯವರ್ಜನ ಶಿಬಿರ ನಡೆಯಲಿದೆ.
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ. ಸವಣೂರು ಅಧ್ಯಕ್ಷತೆ ವಹಿಸಲಿದ್ದಾರೆ.ಕಾಣಿಯೂರು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಲಲಿತಾ ದರ್ಖಾಸ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಕಟಪೂರ್ವ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ , ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಡಬ ಆರಕ್ಷಕ ಠಾಣೆ ಪೋಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್, ಪ್ರಗತಿಪರ ಕೃಷಿಕ ಲಕ್ಷ್ಮಣ ಕರಂದ್ಲಾಜೆ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಕಾಣಿಯೂರು ಲಕ್ಷ್ಮೀನರಸಿಂಹ ಭಜನಾಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆ.8ರಂದು ಮಧ್ಯಾಹ್ನ ನಡೆಯುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಉಡುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ದಕ್ಷಿಣ ಕನ್ನಡ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಸೀತಾರಾಮ ಪೊಸವಳಿಕೆ, ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷ ಸಂತೋಷ್ ಕೆ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

LEAVE A REPLY

Please enter your comment!
Please enter your name here