ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

0

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ , ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾ ರಶ್ಮಿ ವಿದ್ಯಾಲಯದ ರಕ್ಷಕ-ಶಿಕ್ಷಕದ ಉಪಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ವಿದ್ಯಾ ರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾರಾಯಣ ಮೂರ್ತಿ ಉಪಸ್ಥಿತರಿದ್ದರು. ವಿದ್ಯಾರಶ್ಮಿ‌ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಸ್ವಾಗತಿಸಿ, ವಿದ್ಯಾರ್ಥಿ ದೀಪಕ್ ವಂದಿಸಿದರು. ಖತೀಜತ್ ಫಾತೀಮ್ ಕಾರ್ಯಕ್ರಮ ನಿರೂಪಿಸಿದರು.

ಚಿತ್ರ. ಉಮಾಪ್ರಸಾದ್ ರೈ ನಡುಬೈಲು

LEAVE A REPLY

Please enter your comment!
Please enter your name here