ಆ.4: ತ್ರೈಮಾಸಿಕ ಅಂಚೆ ಅದಾಲತ್

0

ಪುತ್ತೂರು: ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಆ.4ರಂದು ಬೆಳಿಗ್ಗೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು ತಕರಾರುಗಳನ್ನು ಪರಿಶೀಲಿಸಲಾಗುವುದು.
ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರಮುಖೇನ, ಅಂಚೆ ಅದಾಲತ್ ತಲೆ ಬರಹದಡಿ ಆ.4ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201, ವಿಳಾಸಕ್ಕೆ ದೂರುಗಳನ್ನು ಕಳುಹಿಸಬಹುದು. ಅಲ್ಲದೆ ಅದೇ ದಿನ ಬೆಳಿಗ್ಗೆ 11.30ರೊಳಗೆ ದೂರವಾಣಿ ಸಂಖ್ಯೆ 08251-230201,230295ಕ್ಕೆ ನೇರವಾಗಿಯೂ ಸಂಪರ್ಕಿಸಬಹುದು. ತಮ್ಮ ದೂರುಗಳನ್ನು ಇ-ಮೇಲ್ [email protected] ಮೂಲಕವೂ ಅದಾಲತ್ತಿಗೆ ಮೊದಲು ತಲುಪುವಂತೆ ಕಳುಹಿಸುವುದು. ಅದಾಲತ್‌ನಲ್ಲಿ ಪುತ್ತೂರು ಅಂಚೆ ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅಂಚೆ ಇಲಾಖೆಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here