ಆ.6: ರಾಮಕುಂಜದಲ್ಲಿ ಎಸ್‌ಎಸ್‌ಎಲ್‌ಸಿ ತುಳು ಪರೀಕ್ಷೆಯಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

0

ರಾಮಕುಂಜ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತೃತೀಯ ಭಾಷೆ ತುಳು ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನೇತ್ರಾವತಿ ತುಳುಕೂಟ ರಾಮಕುಂಜ ಮತ್ತು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ, ರಾಮಕುಂಜ ಇದರ ಸಹಯೋಗದಲ್ಲಿ ಆ.6ರಂದು ಬೆಳಿಗ್ಗೆ 11ಗಂಟೆಗೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.


ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಇದರ ಗೌರವಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆಗಳ ಸಂಚಾಲಕ ಡಾ.ಎಂ.ಮೋಹನ ಆಳ್ವರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈಯವರು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿಯ ಆಕಾಶ್ ರಾಜ್ ಜೈನ್, ಪುತ್ತೂರಿನ ಸ್ವರ್ಣ ಉದ್ಯಮಿ ಬಲರಾಮ ಆಚಾರ್ಯ, ಶ್ರೀರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯಾಧ್ಯಕ್ಷ ಕೃಷ್ಣಮೂರ್ತಿ ಕಲ್ಲೇರಿ, ಕಾರ್ಯದರ್ಶಿ ರಾಧಾಕೃಷ್ಣ ಕುವೆಚ್ಚಾರು, ಎಸ್‌ಆರ್‌ಕೆ ಲ್ಯಾಡರ್‍ಸ್‌ನ ಕೇಶವ ಎ., ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್, ಉಪ್ಪಿನಂಗಡಿ ಗಿರಿಜಾ ಕ್ಲಿನಿಕ್‌ನ ದಂತ ವೈದ್ಯ ಡಾ.ರಾಜರಾಮ್ ಕೆ.ಬಿ., ಮೈಸೂರು ಎಸ್‌ಎಲ್‌ವಿ ಸಂಸ್ಥೆಯ ದಿವಾಕರ ದಾಸ್, ಇಂಜಿನಿಯರ್ ಸುಬ್ರಹ್ಮಣ್ಯ ರಾವ್, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಉಪನ್ಯಾಸಕ ವಸಂತಕುಮಾರ್, ಪುರುಷೋತ್ತಮ ನೆಕ್ಕರೆ ಹಿರೇಬಂಡಾಡಿ, ಜ್ಯೋತಿಷ್ಯ ಭಾಗ್ಯಚಂದ್ರರಾವ್ ರಾಮಕುಂಜ, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಂಚಾಲಕ ಜಯಸೂರ್ಯ ರೈ, ಉಪ್ಪಿನಂಗಡಿ ಧನ್ವಂತರಿ ಆಸ್ಪತ್ರೆಯ ಡಾ.ನಿರಂಜನ್, ಭರತ್‌ಕುಮಾರ್ ಶೆಟ್ಟಿ ಕೇರಿ ತಣ್ಣೀರುಪಂತ, ಸ್ವರ್ಣ ಉದ್ಯಮಿ ಕೃಷ್ಣರಾಜ್, ಶಿವಪ್ರಸಾದ್ ಇಜ್ಜಾವು, ಈಶ್ವರಮಂಗಲ ಜೈ ಗುರುದೇವ್ ಕಂಪ್ಯೂಟರ್‍ಸ್‌ನ ಗಿರೀಶ ರೈ ನೀರ್ಪಾಡಿ, ಪ್ರಸನ್ನ ನಾಗರಬಾವಿ ಬೆಂಗಳೂರು, ಪುರಂದರ ರೈ ಎಲೆಕ್ಟ್ರಿಷಿಯನ್ ಬಾರ್ಲ ಉಪ್ಪಿನಂಗಡಿ, ಆಲಂಕಾರು ಶರವು ಇಂಡಸ್ಟ್ರೀಸ್‌ನ ಪ್ರಶಾಂತ ರೈ ಬಳಂಪೋಡಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


236 ವಿದ್ಯಾರ್ಥಿಗಳು:
ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯು ರಾಜ್ಯದಲ್ಲೇ ಪ್ರಥಮ ಬಾರಿಗೆ ತುಳು ಲಿಪಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದರ ಜೊತೆಗೆ ತುಳು ಭಾಷಾಶಿಕ್ಷಕರಿಗೆ ಕಾರ್ಯಾಗಾರ, ತುಳುಕಮ್ಮಟ, ತುಳು ರಸಮಂಟಮೆ, ತೌಳವರ ಹಬ್ಬ ಆಚರಣೆ ಸೇರಿದಂತೆ ಹಲವಾರು ಕಾರ್ಯಕ್ರಮವನ್ನು ಕಳೆದ 22 ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಪ್ರತಿವರ್ಷ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖಿಲ ಭಾರತ ತುಳು ಒಕ್ಕೂಟ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತೃತೀಯ ಭಾಷೆ ತುಳುವಿನಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ನಡೆಸಿಕೊಂಡು ಬರುತಿತ್ತು. ಆದರೆ ಈ ವರ್ಷ ತುಳು ಸಾಹಿತ್ಯ ಅಕಾಡೆಮಿಗೆ ಪದಾಧಿಕಾರಿಗಳ ನೇಮಕವಾಗದೇ ಇರುವ ಕಾರಣ ವಿದ್ಯಾರ್ಥಿಗಳಿಗೆ ನಿರಾಸೆ ಭಾವನೆ ಮೂಡದಿರಲಿ ಎನ್ನುವ ಉದ್ದೇಶದಿಂದ ನೇತ್ರಾವತಿ ತುಳು ಕೂಟ ರಾಮಕುಂಜ ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 236 ವಿದ್ಯಾರ್ಥಿಗಳಿಗೆ ಹಾಗೂ ತುಳು ಭಾಷಾ ಶಿಕ್ಷಕರಿಗೆ ಅಭಿನಂದನೆ ನಡೆಯಲಿದೆ ಎಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here