ಪೆರ್ಲಂಪಾಡಿ: ಷಣ್ಮುಖದೇವ ಪ್ರೌಢಶಾಲೆಯಲ್ಲಿ ಪುತ್ತೂರು ರೋಟರಿ ಕ್ಲಬ್‌ನಿಂದ ಅರಿವು ಕಾರ್ಯಕ್ರಮ

0

ಪುತ್ತೂರು: ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಇವರ ವತಿಯಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಅರಿವು ಕಾರ್ಯಾಗಾರ ಜು.28 ರಂದು ನಡೆಯಿತು.

ರೋಟರಿ ಕ್ಲಬ್ ಪುತ್ತೂರು ಇದರ ಅಧ್ಯಕ್ಷ ಡಾ.ರಾಜೇಶ್ ಬೆಜ್ಜಂಗಳರವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉನ್ನತವಾದ ಗುರಿ ಇರಬೇಕು, ಜೀವನದಲ್ಲಿ ನೈತಿಕ ಮೌಲ್ಯಗಳಿಗೆ ಪ್ರಾಧಾನ್ಯತೆ ನೀಡಬೇಕು, ಜ್ಞಾನದಾಹ ಇದ್ದರೆ ಆತ ಸಮಾಜದಲ್ಲಿ ಸುಸಂಸ್ಕೃತ ಪ್ರಜೆ ಆಗಬಲ್ಲ ಅದಕ್ಕಾಗಿ ಇಂದಿನ ಅರಿವು ಕಾರ್ಯಕ್ರಮ ಎಂದು ಹೇಳಿದರು.
ಶಾಲಾ ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜ್ಞಾನವನ್ನು ಪಡೆದುಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ, ಇಂತಹ ಅರಿವು ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಜ್ಞಾನದಾಹ ಹೆಚ್ಚುತ್ತದೆ ಎಂದು ಹೇಳಿದರು ಅಲ್ಲದೆ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಚಂದ್ರಹಾಸ ರೈ ಮತ್ತು ರಾಕೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಪಿ.ಎಂ.ಅಶ್ರಫ್ ಉಪಸ್ಥಿತರಿದ್ದರು. ಶಾಲಾ ಆಡಳಿತ ಸಮಿತಿಯ ಕೋಶಾಧಿಕಾರಿ ದಿವಾಕರ ರೈ ಕೆರೆಮೂಲೆ ಪ್ರಾಸ್ತಾವಿಕವಾಗಿ ಮಾತುಗಳೊಂದಿಗೆ ಸ್ವಾಗತಿಸಿದರು. ಮುಖ್ಯಗುರು ಕೃಷ್ಣವೇಣಿ ವಂದಿಸಿದರು. ಆಡಳಿತ ಸಮಿತಿಯ ಗೌರವ ಸಲಹೆಗಾರ ಗಣೇಶ್ ಭಟ್ ಮಾಪಲಮಜಲು, ಸದಸ್ಯರಾದ ಮುರಳೀಕೃಷ್ಣ ಸಿದ್ಧಮೂಲೆ, ಪದಾಧಿಕಾರಿಗಳಾದ ಗಣಪತಿ ಭಟ್ ಎಕ್ಕಡ್ಕ, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here