ಹೊಸಮನೆ ಜನಾರ್ದನ ಗೌಡ ನಿಧನ

0

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಹೊಸಮನೆ ನಿವಾಸಿ ಜನಾರ್ದನ ಯಾನೆ ಜಾರಪ್ಪ ಗೌಡ(55ವ.)ರವರು ಅಲ್ಪಕಾಲದ ಅಸೌಖ್ಯದಿಂದ ಆ.1ರಂದು ಬೆಳಿಗ್ಗೆ ಮಂಗಳೂರಿನ ಫಾದರ್ ಮುಲ್ಲರ‍್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.


ಜನಾರ್ದನ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಹಿರೇಬಂಡಾಡಿ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಮಂಡಳಿಯ ಸದಸ್ಯರಾಗಿದ್ದರು. ಅಲ್ಲದೇ ಹಲವಾರು ನಾಟಕಗಳಲ್ಲಿ ಹಾಸ್ಯ ಕಲಾವಿದರಾಗಿಯೂ ನಟಿಸಿದ್ದರು. ಮೃತರು ತಾಯಿ ಲಕ್ಷ್ಮೀ, ಪತ್ನಿ ಭವ್ಯ, ಪುತ್ರಿಯರಾದ ಯತಿಶ್ರೀ, ಧನ್ಯಶ್ರೀ, ಪುತ್ರ ಸಚಿನ್, ಮೂವರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಹಿರೇಬಂಡಾಡಿ ಶ್ರೀ ಷಣ್ಮುಖ ದೇವಸ್ಥಾನದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ತೋಳ್ಪಾಡಿತ್ತಾಯ, ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ., ಗ್ರಾ.ಪಂ.ಸದಸ್ಯರು, ಶಿಕ್ಷಕರು, ವರ್ತಕರು ಸೇರಿದಂತೆ ಹಲವು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here