ಕರಾಟೆ, ಚೆಸ್ ಸ್ಪರ್ಧೆ-ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಹಾಗೂ ಚೆಸ್ ಸ್ಪರ್ಧೆಯಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ 10ನೇ ತರಗತಿಯ ವಿದ್ಯಾರ್ಥಿಗಳಾದ ವಿಸ್ಮಯ್ ಎನ್. ನಾಯಕ್ ಮತ್ತು ಮೋಕ್ಷಿತ್ ಪಿ.ಎಸ್. ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ರಿಷಿ ಭಾರಧ್ವಜ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ನೆಟ್ಟಣಿಗೆ ಮುಡ್ನೂರು ಇಲ್ಲಿ ಜರುಗಿದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ 10ನೇ ತರಗತಿಯ ವಿದ್ಯಾರ್ಥಿಗಳಾದ ಕೆ.ಎಸ್. ಸುಧನ್ವ ಮತ್ತು ಮೋಕ್ಷಿತ್ ಪಿ.ಎಸ್. ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here