ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತನ್ನ 12ನೇ ವಯಸ್ಸಿನಿಂದ ದೇವರ ಛತ್ರಪತಿಯಾಗಿ ಸೇವೆಯನ್ನು ಆರಂಭಿಸಿ ಕಳೆದ 64 ವರ್ಷಗಳಿಂದಲೂ ಈ ಸೇವೆ ಸಲ್ಲಿಸುತ್ತಿರುವ ನಾರಾಯಣ ಶಗ್ರಿತ್ತಾಯರಿಗೆ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಆ.1ರಂದು ಅವರ ಮನೆಯಲ್ಲೇ ಸನ್ಮಾನಿಸಲಾಯಿತು.
ಸನ್ಮಾನಕ್ಕೆ ಶಗ್ರಿತ್ತಾಯರ ಪತ್ನಿ ನಿವೃತ್ತ ಶಿಕ್ಷಕಿ ಮಹಾಲಕ್ಷ್ಮಿ ಕೃತಜ್ಞತೆ ಅರ್ಪಿಸಿದರು. ಶಗ್ರಿತ್ತಾಯ ದಂಪತಿಯನ್ನು ಸನ್ಮಾನಿಸಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ.ಎ. ವಿ ನಾರಾಯಣ ಅವರು ಮಾತನಾಡಿ ಶಗ್ರಿತ್ತಾಯ ಅವರಿಗೆ ವಿದೇಶದಲ್ಲಿ ನೆಲೆಸುವ ಅವಕಾಶವಿದ್ದರೂ ಶ್ರೀ ಮಹಾಲಿಂಗೇಶ್ವರ ದೇವರ ಸೇವೆಯನ್ನು ಬಹಳ ಶ್ರದ್ಧೆಯಿಂದ ನಡೆಸಿಕೊಂಡು ಬಂದಿರುವುದು ಅವರ ದೈವಭಕ್ತಿ ಮತ್ತು ನಿಷ್ಠೆಗೆ ಸಾಕ್ಷಿಯಾಗಿದೆ ಎಂದರು.
ಪುತ್ತೂರು ಘಟಕದ ಗೌರವಾಧ್ಯಕ್ಷ ಸಂಜೀವ ನಾಯಕ್, ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಹ ಸಂಚಾಲಕ ಭಾಸ್ಕರ್ ಬಾರ್ಯ, ಪುತ್ತೂರು ಘಟಕದ ಕಾರ್ಯಾಧ್ಯಕ್ಷ ಮಹಾಬಲ ರೈ ಒಳತಡ್ಕ, ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ ಹೆಗ್ಡೆ, ಜಿಲ್ಲಾ ಮಹಿಳಾ ಘಟಕದ ಸಂಚಾಲಕಿ ವತ್ಸಲ ರಾಜ್ಞಿ, ಪುತ್ತೂರು ಘಟಕದ ಪದಾಧಿಕಾರಿಗಳಾದ ಚಂದ್ರಶೇಖರ ಆಳ್ವಪಡುಮಲೆ, ಬಾಲಕೃಷ್ಣ ಅನಾರು,ಭವಾನಿ ಶಂಕರ ಶೆಟ್ಟಿ ಪುತ್ತೂರು, ರೇವತಿ ಸಾಲ್ಮರ ಉಪಸ್ಥಿತರಿದ್ದರು. ಪುತ್ತೂರು ಘಟಕದ ಪದ್ಮಯ್ಯ .ಎಚ್ ಸ್ವಾಗತಿಸಿ, ಪ್ರತಿಷ್ಠಾನದ ಉಪಾಧ್ಯಕ್ಷರಾದ ದುಗ್ಗಪ್ಪ .ಯನ್ ವಂದಿಸಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.