ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17ರ ವಯೋಮಾನದೊಳಗಿನ ಬಾಲಕರ ವಿಭಾಗದಲ್ಲಿ ನಿರಂಜನ್ ಕುಮಾರ್ ಎನ್.ಜಿ(10ನೇ), ಪ್ರೇಮ್ ಕುಮಾರ್(10ನೇ) ಹಾಗೂ ಹರ್ಷಿತ್ ಹೆಚ್.ಎನ್(9ನೇ) ಪ್ರಥಮ ಸ್ಥಾನ ಪಡೆದುಕೊಂಡರು. 14ರ ವಯೋಮಾನದೊಳಗಿನ ಬಾಲಕರ ವಿಭಾಗದಲ್ಲಿ ಅನ್ವೇಶ್(8ನೇ) ಪ್ರಥಮ ಸ್ಥಾನ ಹಾಗೂ ಭರತ್ ಕುಮಾರ್(9ನೇ), ಯಶ್ ವಿ(8ನೇ), ವಿಷ್ಣು ಸಿ(8ನೇ)ರವರು ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ಕರಾಟೆ ಗುರುಗಳಾದ ಚಂದ್ರಶೇಖರ ಕನಕಮಜಲುರವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ, ಮೂರ್ತಿ ಜಿ, ಮುಖ್ಯಗುರು ಗಾಯತ್ರಿ ಯು.ಎನ್, ಆಡಳಿತಾಧಿಕಾರಿ ಆನಂದ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ. ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಪ್ರೋತ್ಸಾಹಿಸಿದರು.