ಚೆಸ್ ಸ್ಪರ್ಧೆ: ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ರಕ್ಷಿತ್, ಲಿಖಿತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಸ್ಫರ್ಧೆಯಲ್ಲಿ ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೆಟ್ಟಣಿಗೆ ಮುಡ್ನೂರು ಸರಕಾರಿ ಫ್ರೌಢ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ 7ನೇ ತರಗತಿಯ ರಕ್ಷಿತ್ ಮತ್ತು ಲಿಖಿತ್‌ರವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸದಾಶಿವ ಡಿ ಅವರು ತರಬೇತಿಯನ್ನು ನೀಡಿರುತ್ತಾರೆ. ಶಾಲಾ ಪ್ರಾಂಶುಪಾಲ ಅರುಣ ನಾಯ್ಕ ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here