ಸುಬ್ರಹ್ಮಣ್ಯ: ಡೆಂಟಲ್‌ ಕ್ಲಿನಿಕ್‌ ಗೆ ಹೋದ ವಿವಾಹಿತ ಮಹಿಳೆ ನಾಪತ್ತೆ

0

ಕಡಬ: ಹಲ್ಲಿನ ಚಿಕಿತ್ಸೆಗೆಂದು ಸುಬ್ರಹ್ಮಣ್ಯದ ಆಸ್ಪತ್ರೆಯೊಂದಕ್ಕೆ ತೆರಳಿದ್ದ ವಿವಾಹಿತ ಯುವತಿ ಕಾಣೆಯಾದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತ ಯುವತಿ.

ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬಾತನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಆಸ್ಪತ್ರೆಯೊಂದಕ್ಕೆ ಹಲ್ಲಿನ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ, ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

LEAVE A REPLY

Please enter your comment!
Please enter your name here