ಚೆಸ್: ರಾಮಕುಂಜದ ಅನುಶ್ರೀ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮುಡ್ನೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಉಡುಪ ಆರ್.,ಅವರು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಸಹಕರಿಸಿದ್ದರು.

LEAVE A REPLY

Please enter your comment!
Please enter your name here