ಆ.6 ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ಆಶ್ರಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ವೈದ್ಯಕೀಯ ಶಿಬಿರದ 17ನೇ ತಿಂಗಳ ವೈದ್ಯಕೀಯ ಶಿಬಿರವು ಆ.6ರಂದು ನಡೆಯಲಿದೆ.
ತಜ್ಞರಿಂದ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಇಎನ್‌ಟಿ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಉಚಿತ ಔಷಧಿಗಳನ್ನು ವಿತರಿಸಲಾಗುವುದು.
ತಜ್ಞ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ, ಕೀಲು ಮತ್ತು ಎಲುಬು ತಜ್ಞ ವೈದ್ಯಡಾ. ಸಚಿನ್ ಶಂಕರ್ ಹಾರಕೆರೆ, ಇಎನ್‌ಟಿ ತಜ್ಞೆ ಡಾ. ಅರ್ಚನಾ, ಆಯುರ್ವೇದ ತಜ್ಞ ವೈದ್ಯರಾದ ಡಾ. ವೇಣು ಗೋಪಾಲ್ ಹಾಗೂ ಡಾ. ಸಾಯಿ ಪ್ರಕಾಶ್ ಶಿಬಿರದಲ್ಲಿ ವೈದ್ಯರುಗಳಾಗಿ ಆಗಮಿಸಲಿದ್ದಾರೆ ಎಂದು ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here