ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ವಿಶ್ವದರ್ಜೆಗೆ – ಕಾಮಗಾರಿಗೆ ಆ.6ರಂದು ಪ್ರಧಾನಿ ಶಂಕು ಸ್ಥಾಪನೆ

0

ಮಂಗಳೂರು:ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ನಿಟ್ಟಿನಲ್ಲಿ ಆ.6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ದ.ಕ.ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಅಂತರ್ರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಪ್ರಧಾನಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಬಜೆಟ್ ಭಾಷಣದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್, ಮಂಗಳೂರು ಸೆಂಟ್ರಲ್, ಬಂಟ್ವಾಳ ಮತ್ತು ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿದ್ದರು. ಮಂಗಳೂರು ಜಂಕ್ಷನ್ ನಿಲ್ದಾಣವನ್ನು 19.32ಕೋಟಿ ರೂ.ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಈ ಯೋಜನೆಯಡಿ ಇತರ ರೈಲು ನಿಲ್ದಾಣಗಳ ಅಭಿವೃದ್ಧಿಯನ್ನೂ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

LEAVE A REPLY

Please enter your comment!
Please enter your name here